ಪ್ರಮುಖ ಸುದ್ದಿ
ನೀಟ್ ಪರೀಕ್ಷಾ ಕೇಂದ್ರ ಆಯ್ಕೆಗೆ ಅವಕಾಶ ನೀಡಿ –ಹಾರಣಗೇರಾ
ನೀಟ್ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ ನೀಡಿ ಇತ್ತೀಚೆಗೆ ಸರ್ಕಾರ ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ ಕೋರ್ಸುಗಳಿಗಾಗಿ ನಡೆಯುವ ನೀಟ್ ಪರೀಕ್ಷೆಗೆ ಕೊರೊನಾ ಪರಿಣಾಮದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ಆಯ್ಕೆಗೆ ಮತ್ತು ಬದಲಾವಣೆಗೆ ಅವಕಾಶ ನೀಡಿತು.
ಈ ಬದಲಾವಣೆ ಕುರಿತು ಮಾಹಿತಿ ಬಹಳಷ್ಟು ಗ್ರಾಮೀಣ ವಿದ್ಯಾರ್ಥಿಗಳಿಗೆ ತಲುಪದೆ ಇರುವುದರಿಂದ ಪರೀಕ್ಷಾ ಕೇಂದ್ರದ ಆಯ್ಕೆ ಮತ್ತು ಬದಲಾವಣೆ ಮಾಡಿಕೊಳ್ಳಲು ಸಾದ್ಯವಾಗಿಲ್ಲ.
ನೀಟ್ ಪರೀಕ್ಷೆಗೆ ಜುಲೈ 26 ರಂದು ನಡೆಸಲು ದಿನಾಂಕ ನಿಗದಿಯಾಗಿದೆ. ಹೆಚ್ಚುತ್ತಿರುವ ಕೊರೊನಾ ಪರಿಣಾಮದಿಂದ ದೂರದ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತುಂಬಾ ಅನಾನುಕೂಲ ಆಗುವುದರಿಂದ ವಿದ್ಯಾರ್ಥಿಗಳಿಗೆ ತಮ್ಮ ಸಮೀಪ ಇರುವ ಜಿಲ್ಲೆಗಳಿಗೆ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಳ್ಳಲು ದಯವಿಟ್ಟು ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಉಪನ್ಯಾಸಕ ರಾಘವೇಂದ್ರ ಹಾರಣಗೇರಾ ಮನವಿ ಮಾಡಿದ್ದಾರೆ.