ಪ್ರಮುಖ ಸುದ್ದಿ
ಫುಲ್ ಟೈಮ್ ರಾಜಕಾರಣಿ, ಸಿನಿಮಾ ಕ್ಷೇತ್ರಕ್ಕೆ ಗುಡ್‌ಬೈ: ನಿಖಿಲ್ ಕುಮಾರಸ್ವಾಮಿ

ನಾನೀಗ ಫುಲ್ ಟೈಮ್ ರಾಜಕಾರಣಿಯಾಗಿದ್ದು, ಸಿನಿಮಾ ಮಾಡುವುದನ್ನು ನಿಲ್ಲಿಸಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿ, ನಾನು ಪಕ್ಷ ಕಟ್ಟುವ ಕಡೆ ಹೆಚ್ಚು ಗಮನ ಕೊಡುತ್ತಿದ್ದೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ಇನ್ನುಮುಂದೆ ಯಾವುದೇ ಸಿನಿಮಾ ಒಪ್ಪಿಕೊಳ್ಳುವುದಿಲ್ಲ. ಯಾವುದೇ ಸಿನಿಮಾದಲ್ಲಿಯೂ ನಟಿಸುವುದಿಲ್ಲ. ಸಿನಿಮಾ ಕ್ಷೇತ್ರದ ಎಲ್ಲ ಚಟುವಟಿಕೆಗಳನ್ನೂ ನಿಲ್ಲಿಸಿದ್ದೇನೆ ಎಂದರು. ನಿಖಿಲ್ ಅವರು ರೈಡರ್, ಜಾಗ್ವಾರ್ ಸೀತಾರಾಮ ಕಲ್ಯಾಣ, ಕುರುಕ್ಷೇತ್ರ ಸಿನಿಮಾಗಳಲ್ಲಿ ನಟಿಸಿದ್ದಾರೆ.