ಪ್ರಮುಖ ಸುದ್ದಿ
ನಾಳೆ ಬೆಳಗಾವಿಗೆ ಬರ್ತಾರಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಬೆಂಗಳೂರು : ಪ್ರವಾಹ ಪರಿಸ್ಥಿತಿಯಿಂದ ಹೈರಾಣಾಗಿರುವ ಕರ್ನಾಟಕಕ್ಕೆ ಕೊನೆಗೂ ಕೇಂದ್ರ ಸರ್ಕಾರದ ಪರವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬರುತ್ತಿದ್ದಾರೆ. ನಾಳೆ ಕರ್ನಾಟಕಕ್ಕೆ ಆಗಮಿಸಲಿರುವ ಅವರು ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ನಾಳೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗಾವಿ ಭೇಟಿ ನೀಡಿ ಪ್ರವಾಹ ಸ್ಥಿತಿ ಪರಿಶೀಲಿಸುವ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಅಂತೆಯೇ ಅದೇ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರವಾಹದಿಂದಾದ ವಾಸ್ತವ ಸ್ಥಿತಿ ವಿವರಿಸಿ ಪರಿಹಾರ ಕಾರ್ಯಕ್ಕಾಗಿ ಸೂಕ್ತ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗುವುದು ಎಂದು ಸಿಎಂ ಗದಗ ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.