ಪ್ರಮುಖ ಸುದ್ದಿHomeಮಹಿಳಾ ವಾಣಿಯೂತ್ ಐಕಾನ್ವಿನಯ ವಿಶೇಷ

NTPC Recruitment 2024: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ನೇಮಕಾತಿ- ಈ ಹುದ್ದೆಗಳ ಭರ್ತಿ

NTPC Recruitment 2024: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (National Thermal Power Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 26 ಅಸೋಸಿಯೇಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್(Online) ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA ಅಥವಾ ICWA, CA(ಇಂಟರ್) ಅಥವಾ ICWA (ಇಂಟರ್) ಪೂರ್ಣಗೊಳಿಸಿರಬೇಕು.

ವಯೋಮಿತಿ ಸಡಿಲಿಕೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65ರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/05/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 12, 2024

Related Articles

Leave a Reply

Your email address will not be published. Required fields are marked *

Back to top button