ಪ್ರಮುಖ ಸುದ್ದಿ
ಒಂಟಿ ಮನೆಯ ನಿವಾಸಿಗಳೇ ಎಚ್ಚರ ಎಚ್ಚರ!
ಮನೆ ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳು
ಕಲಬುರಗಿ: ತಾಲೂಕಿನ ಹೀರಾಪುರ ಗ್ರಾಮದ ಹೊರವಲಯದಲ್ಲಿರುವ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಾಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡಿದ ಘಟನೆ ನಡೆದಿದೆ. ಪರಮೇಶ್ವರ ಎಂಬುವವರ ಮನೆ ಬಾಗಿಲು ಮುರಿದು ದುಷ್ಕರ್ಮಿಗಳು ಒಳಗೆ ನುಗ್ಗಿದ್ದಾರೆ. ಸುಮಾರು ನಾಲ್ಕು ಜನ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳನ್ನು ತೋರಿಸಿ ಮನೆಯಲ್ಲಿದ್ದವರನ್ನು ಬೆದರಿಸಿದ್ದಾರೆ. ಬಳಿಕ 105 ಗ್ರಾಂ ಚಿನ್ನಾಭರಣ, 21ಸಾವಿರ ರೂಪಾಯಿ ನಗದು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಕಳೆದ ರಾತ್ರಿ ಘಟನೆ ನಡೆದಿದ್ದು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಎಸ್ಪಿ ಎನ್.ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.