ಪ್ರಮುಖ ಸುದ್ದಿ
ಶಹಾಪುರಃ ವಯೋವೃದ್ಧರಿಗೆ ಲಸಿಕೆ ಹಾಕಿಸಿಕೊಳ್ಳಲು ಸಾರಿಗೆ ವ್ಯವಸ್ಥೆ – ಪಟ್ಟೇದಾರ
ವಯೋವೃದ್ಧರಿಗೆ ಲಸಿಕೆ ಹಾಕಿಸಿಕೊಳ್ಳಲು ಸಾರಿಗೆ ವ್ಯವಸ್ಥೆಃ ಪಟ್ಟೇದಾರ
ಶಹಾಪುರಃ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ನಗರದ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕಾರಣ ಅರ್ಹ ವೃದ್ಧರು ಸದುಪಯೋಗ ಪಡೆದುಕೊಳ್ಳಬೇಕೆಂದು ನಗರಸಭೆ ಆಯುಕ್ತರಾದ ರಮೇಶ ಪಟ್ಟೇದಾರ ಅವರು ವಿನಯವಾಣಿಗೆ ತಿಳಿಸಿದ್ದಾರೆ.
ರವಿವಾರದಿಂದ ನಗರದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೋವಿಡ್ ಲಸಿಕೆ ಹಾಕಲಾಗುತ್ತಿದ್ದು, ಬೆಳಗ್ಗೆ 11 ಗಂಟೆಯಿಂದ ನಗರದ ಅರ್ಹ ವೃದ್ಧರಿಗೆ ಆಸ್ಪತ್ರೆಗೆ ತೆರಳಲು ಆಟೋ ವ್ಯವಸ್ಥೆ ಮಾಡಲಾಗುತ್ತಿದೆ. ನಾಗರಿಕರು ಇದರ ಸದುಪಯೋಗ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಸಂಪರ್ಕಿಸಲು ಅವರು ಕೋರಿದ್ದಾರೆ. ರವಿವಾರದಿಂದ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಟೋ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.