Homeಪ್ರಮುಖ ಸುದ್ದಿ
ವಾಹನ ಸವಾರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್, ಡೀಸೆಲ್ ದರ ಏರಿಕೆ
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಶನಿವಾರ ಪ್ರಕಟಿಸಿದೆ. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ (Petrol, Diesel Price) ದುಬಾರಿಯಾಗುತ್ತಿದೆ.
ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚವಾಗುವ ಸಾಧ್ಯತೆ ಇದೆ.