ಪ್ರಮುಖ ಸುದ್ದಿ
ಸಾವರ್ಕರ್ ಬದಲು ಡಾ.ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಿ-ಸಿದ್ದು
ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಿ
ವಿವಿ ಡೆಸ್ಕ್ಃ ಸಾವರ್ಕರ್ ಅವರಿಗೆ ‘ಭಾರತ ರತ್ನ’ ಆ ಮೇಲೆ ಕೊಡುವಿರಂತೆ ಮೊದಲು ಸಾಮಾಜಿಕ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತರತ್ನ ನೀಡಿ ಎಂದು ಸಿದ್ರಾಮಯ್ಯ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರ ವೀರ ಸಾವರ್ಕರ ಅವರಿಗೆ ಭಾರತ ರತ್ನ ನೀಡಲು ಹೊರಟ ಹಿನ್ನೆಲೆ ಸಾವರ್ಕರ್ ಗಾಂಧೀ ಹತ್ಯೆಯ ಆರೋಪಿ ಎಂದು ಮಾಜಿ ಸಿಎಂ ಸಿದ್ರಾಮಯ್ಯ ಜರಿದಿದ್ದಾರೆ. ಗಾಂಧಿ ಹತ್ಯೆಯಲ್ಲಿ ಸಾವರ್ಕರ್ ಕೈವಾಡವಿದೆ ಎಂದು ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದರು. ಈಗ ಟ್ವಿಟರ್ ನಲ್ಲಿ ಭಾರತ ರತ್ನ ಮೊದಲು ಡಾ.ಶಿವಕುಮಾರ ಸ್ವಾಮೀಜಿಯವರಿಗೆ ನೀಡುವ ಮೂಲಕ ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.