ಪ್ರಮುಖ ಸುದ್ದಿ
ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಫೋನ್ ಕದ್ದಾಲಿಕೆ – ರೇಣುಕಾಚಾರ್ಯ ಬಾಂಬ್
ದಾವಣಗೆರೆ : ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅಧಿಕಾರ ಉಳಿಸಿಕೊಳ್ಳಲು ವಾಮಮಾರ್ಗ ಹಿಡಿದಿದ್ದರು. ವಿಪಕ್ಷ ನಾಯಕರಾಗಿದ್ದ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಅದ್ಯಕ್ಷರೂ , ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ನನ್ನ ಫೋನ್ ಸೇರಿದಂತೆ ಇತರರ ಫೋನ್ ಕದ್ದಾಲಿಕೆ ನಡೆಸಿದ್ದರು ಎಂದು ದಾವಣಗೆರೆಯಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಫೋನ್ ಕದ್ದಾಲಿಕೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಅವರು ಆಗ್ರಹಿಸಿದ್ದಾರೆ.