ಪ್ರಮುಖ ಸುದ್ದಿ
ಶಹಾಪುರ- ವೈಷ್ಣವಿ ಲಾಡ್ಜ್ ಮೇಲೆ ದಾಳಿ ಅಕ್ರಮ ಮದ್ಯ ಜಪ್ತಿ
ವೈಷ್ಣವಿ ಲಾಡ್ಜ್ ಮೇಲೆ ದಾಳಿ ಅಕ್ರಮ ಮದ್ಯ ಜಪ್ತಿ
ಯಾದಗಿರಿಃ ಜಿಲ್ಲೆಯ ಶಹಾಪುರ ನಗರದ ವೈಷ್ಣವಿ ಲಾಡ್ಜ್ವೊಂದರಲ್ಲಿ ಅಕ್ರಮ ಮದ್ಯ ಮಾರಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ವೆಂಕಟೇಶ ಹೊಗಿಬಂಡಿ ನೇತೃತ್ವದಲ್ಲಿ ಶುಕ್ರವಾರ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 1.76 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. ಈ ವೇಳೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಬಾ ಮೇಲೂ ದಾಳಿಃ ಇದೇ ವೇಳೆ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿ ಬರುವ ಭಾಗ್ಯವಂತಿ ದಾಬಾ ಮೇಲೂ ದಾಳಿ ನಡೆಸಿದ್ದು, ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿದ್ದ 30 ಸಾವಿರ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋಗಿ ಠಾಣೆಯಲ್ಲಿ ಪಿಎಸ್ಐ ಒಡೆಯರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.