ಪ್ರಮುಖ ಸುದ್ದಿ

ಕಳಪೆ ಗುಣಮಟ್ಟದ ರಸಗೊಬ್ಬರ ಮಾರಾಟ ಸೂಕ್ತ ಕ್ರಮಕ್ಕೆ ಸಚಿವ ಚವ್ಹಾಣ ಸೂಚನೆ

ಕಳಪೆ ಗುಣಮಟ್ಟದ ರಸಗೊಬ್ಬರ ಮಾರಾಟಃ ಪ್ರಭು ಚವ್ಹಾಣ ಖಡಕ್ ಸೂಚನೆ

ಕಳಪೆ ಗುಣಮಟ್ಟದ ರಸಗೊಬ್ಬರ ಮಾರಾಟಃ ಪ್ರಭು ಚವ್ಹಾಣ ಖಡಕ್ ಸೂಚನೆ

ಯಾದಗಿರಿ– ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ರಸಗೊಬ್ಬರ ಗೊಬ್ಬರವನ್ನು ಮಾರಾಟ ಮಾಡಿದ್ದಲ್ಲಿ, ಅಂತವರನ್ನು ಪತ್ತೆಹಚ್ಚಿ ಪೊಲೀಸ್ ಕೇಸ್ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಪಶುಸಂಗೋಪನೆ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ. ಚವ್ಹಾಣ ಅವರು ಖಡಕ್ ಸೂಚನೆ ನೀಡಿದರು.

ಶನಿವಾರ ಯಾದಗಿರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಂiÀಲ್ಲಿನ ಕುಡಿಯುವ ನೀರಿನ ಸಮಸ್ಯೆ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ/ ಗೊಬ್ಬರ ವಿತರಣೆ ಕುರಿತಂತೆ ಪರಾಮರ್ಷಿಸಲು ಕರೆದಿದ್ದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಪ್ರಸಕ್ತ ವರ್ಷ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸ ಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ಒದಗಿಸಬೇಕು ಎಂದು ಸೂಚಿಸಿದರು. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳು ಎಲ್ಲಾ ರಸಗೊಬ್ಬರ ಮಳಿಗೆಗಳನ್ನು ತಪಾಸಣೆ ಮಾಡಬೇಕು, ತಪ್ಪಿತಸ್ಥ ಮಾರಾಟಗಾರರು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಯಾವುದೇ ಸಮಸ್ಯೆ ಇಲ್ಲ. ಅದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವರು ಈ ಸಂದರ್ಭದಲ್ಲಿ ಧೈರ್ಯ ತುಂಬಿದರು. ಮುಂಗಾರು ಹಂಗಾಮಿಗೆ ಒಟ್ಟು 1,17,360 ಮೆಟ್ರಿಕ್ ಟನ್‍ನಷ್ಟು ರಸಗೊಬ್ಬರದ ಅವಶ್ಯಕತೆಯಿದ್ದು, ಜಿಲ್ಲೆಯಲ್ಲಿ ಪ್ರಸ್ತುತ 25,701 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇರುತ್ತದೆ. 3,90,210 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ಪ್ರಮುಖ ಬೆಳೆಗಳಾದ ಭತ್ತ-87,000, ತೊಗರಿ-96,000, ಹೆಸರು-26010, ಹತ್ತಿ-1,66,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಬೆಳೆಗಳಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜಗಳನ್ನು ದಾಸಾನು ಮಾಡಿ, ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪರಾಮರ್ಶಿಸಿದ ಸಚಿವರು, ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಏಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆಯೋ ಶೀಘ್ರ ಪರಿಹರಿಸಬೇಕು ಎಂದು ತಾಲೂಕಿನ ತಹಸೀಲ್ದಾರರು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು. ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಹೋಗಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ತಿಳಿಸಿದರು.
ಗ್ರಾಮಗಳಲ್ಲಿ ಪೈಪ್ ಹೊಡೆದು ನೀರು ಸೋರಿಕೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದು ಪಂಚಾಯತ್ ರಾಜ್ ಇಂಜಿನಿಯರ್‍ಗಳಿಗೆ ಸೂಚಿಸಿದರು.
ಕುಡಿಯುವ ನೀರಿಗೆ ಸಂಬಂಧಿಸಿದ ದೂರಗಳನ್ನು ಬೇಗನೆ ಇಥ್ಯರ್ತ ಮಾಡುವಂತೆ ಸೂಚಿಸಿದ ಸಚಿವರು, ಸೂಚನೆಗಳನ್ನ ಪಾಲನೆ ಮಾಡದಿದಂತಹ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಾನುವರುಗಳಿಗೆ ಬಿಸಿ ತಾಪ ತಟ್ಟದಂತೆ ನೋಡಿಕೊಳ್ಳಲು ಜಿಲ್ಲಾ ಉಸ್ತುವರಿ ಸಚಿವರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಹೇಳಿದರು. ಯಾದಗಿರಿ ಕ್ಷೇತ್ರದ ಶಾಸಕ ವೆಂಕಟಗೌಡರೆಡ್ಡಿ ಮುದ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರೇಶರ ನಾಯ್ಕ್, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲೆಯ ತಹಸೀಲ್ದಾರರು, ಕೃಷಿ ಇಲಾಖೆ ಅಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು,ಜಿಲ್ಲೆಯ ನಗರಸಭೆ ಹಾಗೂ ಪುರಸಭೆ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button