Homeಜನಮನಪ್ರಮುಖ ಸುದ್ದಿ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಆ. 3ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3 ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಾಗೇಂದ್ರ ಅವರ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರನ್ನು ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಹಗರಣದ ಆರೋಪಿ ಸತ್ಯನಾರಾಯಣ ವರ್ಮನನ್ನು ಬಾಡಿವಾರೆಂಟ್ ಮೇಲೆ ನಮಗೆ ನೀಡಿ ಎಂದು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಹಗರಣ ಸಂಬಂಧಪಟ್ಟಂತೆ ಸತ್ಯನಾರಾಯಣ ವರ್ಮನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಪ್ರಸ್ತುತ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ. ಇಡಿ ಅಧಿಕಾರಿಗಳು ಜುಲೈ 21 ರಂದು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಸತ್ಯನಾರಾಯಣ ವರ್ಮನನ್ನು ವಿಚಾರಣೆಗೆ ಒಳಪಡಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button