ಪ್ರಮುಖ ಸುದ್ದಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ
ವಿವಿ ಡೆಸ್ಕ್ಃ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಇಂದು ವಿಧಿವಶರಾದರು. ಅವರು ಹಲವಾರು ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಚಿಕಿತ್ಸೆಗೆ ಸ್ಪಂಧಿಸಿದೆ ಕೊನೆಯುಸಿರೆಳೆದರು.
ಮುಖರ್ಜಿ ಭಾರತೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದರು. ಕಾಂಗ್ರೆಸ್ ಬಲವರ್ಧನೆಗೆ ಶ್ರಮಿಸಿದವರು, ರಾಜಕೀಯವಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ ಅವರು ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ್ದರು.
ಮುಖರ್ಜಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾಳೆ. ಅವರು ಭಾರತದ 13 ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಪಶ್ಚಿಮಬಂಗಾಲದ ಬಿರ್ ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದವರು.
ರಾಷ್ಟ್ರ ದಾದ್ಯಂತ ಹೆಸರು ವಾಸಿಯಾದವರು. ರಾಜಕೀಯದ ಹಲವಾರು ಮಹತ್ವದ ಹುದ್ದೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಅವರ ನಿಧನದ ದುಃಖವನ್ನು ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ತಡೆಯುವ ಶಕ್ತಿ ಆ ದೇವರು ಕರುಣಿಸಲಿ ಎಂದು ವಿನಯವಾಣಿ ಆಶಿಸುತ್ತದೆ.