ಪ್ರಮುಖ ಸುದ್ದಿ
ಕಲಬುರಗಿ : ಕಲ್ಯಾಣ ಕರ್ನಾಟಕದ ಕೂಗು, 50ಜನರ ಬಂಧನ
‘ಕಲ್ಯಾಣ ಕರ್ನಾಟಕ’ ಹೋರಾಟಗಾರರ ಬಂಧನ
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯವನ್ನಾಗಿ ವಿಭಜನೆ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಯಿತು. ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರತ್ಯೇಕ ಧ್ವಜಾರೋಹಣ ನಡೆಸಲು ಮುಂದಾದರು. ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಘೋಷಣೆ ಕೂಗಿದರು.
ಪ್ರಾದೇಶಿಕ ಅಸಮಾತೋಲನೆಯಿಂದಾಗಿ ಹೈದರಾಬಾದ್ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಅಲ್ಲದೆ ವಿಶೇಷ ಪ್ರಾತಿನಿಧ್ಯ ನೀಡಲು ಜಾರಿಗೊಳಿಸಿರುವ 371ಜೆ ವಿಧಿಯ ಸಮರ್ಪಕ ಅನುಷ್ಠಾನ ಆಗಿಲ್ಲ. ಸರ್ಕಾರ ಈ ಭಾಗದ ಬಗ್ಗೆ ನಿರ್ಲಕ್ಷವಹಿಸಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕಾಗಮಿಸಿದ ಸ್ಟೇಶನ್ ಬಜಾರ್ ಠಾಣೆಯ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದರು.