Homeಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

JOBS: ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- LLB ಆದವರು ಅಪ್ಲೈ ಮಾಡಿ

NIA Recruitment 2024: ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಪಬ್ಲಿಕ್ ಪ್ರಾಸಿಕ್ಯೂಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಜುಲೈ 8, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆಯ ಮಾಹಿತಿ:
ಸೀನಿಯರ್ ಪಬ್ಲಿಕ್ ಪ್ರಾಸಿಕ್ಯೂಟರ್-3
ಪಬ್ಲಿಕ್ ಪ್ರಾಸಿಕ್ಯೂಟರ್-2

ವಿದ್ಯಾರ್ಹತೆ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನಿನಲ್ಲಿ ಪದವಿ, ಎಲ್​ಎಲ್​ಬಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 8, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಸೀನಿಯರ್ ಪಬ್ಲಿಕ್ ಪ್ರಾಸಿಕ್ಯೂಟರ್- ಮಾಸಿಕ ₹ 67,700-2,08,700
ಪಬ್ಲಿಕ್ ಪ್ರಾಸಿಕ್ಯೂಟರ್- ಮಾಸಿಕ ₹ 56,100-1,77,500

ಉದ್ಯೋಗದ ಸ್ಥಳ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

SP (ನಿರ್ವಾಹಕ)
ರಾಷ್ಟ್ರೀಯ ತನಿಖಾ ಸಂಸ್ಥೆ ಹೆಡ್ ಕ್ವಾಟ್ರಸ್
CGO ಕಾಂಪ್ಲೆಕ್ಸ್ ಎದುರು
ಲೋಧಿ ರಸ್ತೆ
ನವದೆಹಲಿ-110003

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/05/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 8, 2024

Related Articles

Leave a Reply

Your email address will not be published. Required fields are marked *

Back to top button