ಪ್ರಮುಖ ಸುದ್ದಿ
ಪಾಪನಾಶ ದೇಗುಲದ ಪೂಜಾರಿ ಭೀಕರ ಹತ್ಯೆ!
ಬೀದರ : ನಗರದ ಪಾಪನಾಶ ದೇಗುಲದ ಪೂಜಾರಿ ರಮೇಶಸ್ವಾಮಿ(38) ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಪಾಪನಾಶ ದೇಗುಲದ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಈವರೆಗೆ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬೀದರ ಪೊಲೀಸ್ ಠಾಣೆಯಲಿ ಈ ಕುರಿತು ಪ್ರಕರಣ ದಾಖಲಾಗಿದೆ.