Punjab & Sind Bank Recruitment: 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ!
ಭಾರತ ಸರ್ಕಾರದ ಅಧೀನದಲ್ಲಿರುವ ಪಂಜಾಬ್ ಅಂಡ್ ಸಿಂಧ್ ಬ್ಯಾಂಕಿನಲ್ಲಿ ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ(Punjab & Sind Bank Recruitment) ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ.
ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 1 ಲಕ್ಷಕ್ಕೂ ಹೆಚ್ಚು ವೇತನ ನೀಡಲಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯೂ ಇಲ್ಲಿದೆ.
Punjab & Sind Bank Recruitment 2024 – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಇದೇ ತಿಂಗಳು ಸೆಪ್ಟೆಂಬರ್ 15ನೇ ತಾರೀಖಿನ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಲೆಕ್ಕಪರಿಶೋಧಕ, ಎಸ್ ಕ್ಯೂ ಎಲ್ ಡೆವಲಪರ್, ಡಿಜಿಟಲ್ ಮಾರ್ಕೆಟಿಂಗ್, ಇನ್ಫಾರ್ಮಶನ್ ಟೇಕ್ನಾಲಜಿ, ಹುಮೆನ್ ರಿಸೋರ್ಸ್, ಸೀನಿಯರ್ ಮ್ಯಾನೇಜರ್, ಚೀಫ್ ಮ್ಯಾನೇಜರ್ ಸೇರಿದಂತೆ ಒಟ್ಟು ವಿವಿಧ 213 ಹುದ್ದೆಗಳು ಖಾಲಿ ಇವೆ.
Education qualification-ಶೈಕ್ಷಣಿಕ ಅರ್ಹತೆಗಳೇನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯದಲ್ಲಿ ಪದವಿ ಶಿಕ್ಷಣ ಅಥವಾ ಸ್ನಾತಕೋತ್ತರ ಪದವಿ ಶಿಕ್ಷಣ ಮುಗಿಸಿರಬೇಕು.
ವಯೋಮಿತಿ ಮಾನದಂಡ: ಅರ್ಜಿ ಸಲ್ಲಿಸುವವರು ಕನಿಷ್ಠ 25ರಿಂದ ಗರಿಷ್ಠ 40 ವರ್ಷದ ವಯೋಮಿತಿಯಲ್ಲಿರಬೇಕು.
Monthly salary-ಆಯ್ಕೆಯಾದವರಿಗೆ ಸಿಗುವ ಅಂದಾಜು ವೇತನದ ವಿವರ:
• ಮ್ಯಾನೇಜರ್ ಹುದ್ದೆಗಳಿಗೆ – ₹93,960ರೂ
.• ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ – 1,05,280ರೂ.
• ಚೀಫ್ ಮ್ಯಾನೇಜರ್ – 1,20,940ರೂ.
selection process- ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನ :
ಅರ್ಜಿ ಸಲ್ಲಿಸಿದ ಅರ್ಥ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರದಲ್ಲಿ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದಲ್ಲಿ ವಿದ್ಯಾರ್ಥಿಗಳ ಗಳಿಸುವ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.
How to apply-ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ, ಅದರಲ್ಲಿರುವ ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು, ನೀವು ಅರ್ಹರಿದ್ದರೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
Important dates-ನೇಮಕಾತಿಯ ಪ್ರಮುಖ ದಿನಾಂಕಗಳು :
• ಅರ್ಜಿ ಸಲ್ಲಿಸುವ ಪ್ರಕ್ರಿಯೆ
ಆರಂಭವಾದ ದಿನಾಂಕ – 31 ಆಗಸ್ಟ್ 2024
• ಅರ್ಜಿ ಸಲ್ಲಿಸುವ ಪ್ರಕ್ರಿಯೆ
ಮುಕ್ತಾಯಗೊಳ್ಳುವ ದಿನಾಂಕ – 15 ಸೆಪ್ಟೆಂಬರ್ 2024
ಪ್ರಮುಖ ಲಿಂಕುಗಳು –
• ಅಧಿಸೂಚನೆ – Download Now
• ಅರ್ಜಿ ಸಲ್ಲಿಸುವ ಲಿಂಕ್ – Click here