ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಯೋಜನೆಯ ಹಣ ಜಮಾ ಆಗದಿದ್ದರೆ ತಪ್ಪದೆ ಈ ಕೆಲಸ ಮಾಡಿ

(AnnaBhagya) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಹಣ ಹಲವು ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿಲ್ಲ. ಆದರೆ ಇದೀಗ ಫಲಾನುಭವಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಹೌದು, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಇತರ ಇಲಾಖೆಗಳ ಸಹಯೋಗದಲ್ಲಿ ಕಲಘಟಗಿಯಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಸಂತೋಷ್ ಲಾಡ್ ಮಾತನಾಡಿದ
ಅವರು, ಅನ್ನಭಾಗ್ಯ ಯೋಜನೆ ತಲುಪದ ಪಡಿತರದಾರರಿಗೆ ಆಧಾರ್ ಕೆವೈಸಿ ಅಭಿಯಾನ ಮಾಡುವಂತೆ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆಯ ನೇರ ನಗದು ಹಣ ಜಮೆ ಆಗದ ಫಲಾನುಭವಿಗಳಿಗೆ ಆಧಾರ್ ಜೋಡಣೆ ಮತ್ತು ಬಾಂಕ್ ಹೊಸ ಖಾತೆ ತೆರೆಯಲು ಅನುಕೂಲವಾಗುವಂತೆ ಆಯಾ ನಗರ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಕೆವೈಸಿ ಜೋಡಣೆಯ ಸಲುವಾಗಿ ಜುಲೈ 1 ರಿಂದ 7 ರ ವರೆಗೆ ಸಪ್ತಾಹ ಅಭಿಯಾನ ಆಯೋಜಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹೀಗಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಹಣ ಜಮಾ ಆಗದೇ ಇರುವವರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.