ಪ್ರಮುಖ ಸುದ್ದಿ
ವಿದ್ಯುತ್ ಸ್ಪರ್ಶಿಸಿ ಅಪ್ಪ-ಮಗ ಸಾವು!
ಮಂಡ್ಯ : ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಅಪ್ಪ ಮತ್ತು ಮಗ ಸ್ಥಳದಲ್ಲೇ ಸಾವಿಗೀಡಾದ ಘಟನೆ ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ಹೆಮ್ಮಿಗೆ ಗ್ರಾಮದ ಕರಗುಂಡೇಗೌಡ(62) ಹಾಗೂ ಪುತ್ರ ಸತೀಶ್ (32) ಮೃತ ದುರ್ದೈವಿಗಳು ಎಂದು ಗರುತಿಸಲಾಗಿದೆ.
ಜಮೀನಿನ ಬಳಿ ಇದ್ದ ರೇಷ್ಮೆ ಸಾಕಾಣಿಕೆ ಮನೆಯಲ್ಲಿ ರೇಷ್ಮೆ ಹುಳುವಿಗೆ ಸೊಪ್ಪು ಹಾಕಲು ಹೋದಾಗ ದುರ್ಘಟನೆ ನಡೆದಿದೆ. ಸ್ಥಳಕ್ಕೆ ವಿದ್ಯುತ್ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.