ಪ್ರಮುಖ ಸುದ್ದಿ
ಹೈದರಾಬಾದ್ ಕರ್ನಾಟಕ ಪ್ರದೇಶ್ ಪೇ ಬಿಜೆಪಿ ಹವಾ ಚಲ್ ರಹಾ ಹೈ!?
ಬೆಂಗಳೂರು: ರಾಯಚೂರು ನಗರ ಮತಕ್ಷೇತ್ರದ ಜೆಡಿಎಸ್ ಶಾಸಕ ಶಿವರಾಜ ಪಾಟೀಲ್ ಹಾಗೂ ಲಿಂಗಸೂಗೂರು ಮತಕ್ಷೇತ್ರದ ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಇಬ್ಬರೂ ಶಾಸಕರು ಕೊನೆಗೂ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸರ್ಕಾರದ ಕಾರ್ಯದರ್ಶಿ ಎಸ್.ಮೂರ್ತಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅಂತೆಯೇ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಇಬ್ಬರೂ ಶಾಸಕದ್ವಯರು ಬೆಂಗಳೂರಿನ ಬಿಜೆಪಿ ಕಚೇರಿಗೆ ತೆರಳಿ ಮಾಜಿ ಸಿಎಂ, ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾಜಿ ಸಚಿವ ರಾಜೂಗೌಡ ಸೇರಿದಂತೆ ಇತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ. ಹೀಗಾಗಿ, ಹೈದರಾಬಾದ್ ಕರ್ನಾಟಕದ ಶಾಸಕರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದು ಈ ಭಾಗದಲ್ಲಿ ಬಿಜೆಪಿ ಹವಾ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.