ಪ್ರಮುಖ ಸುದ್ದಿ
ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!
ಮುಂಬೈ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಆದರೆ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮುಂಬೈ ನಗರದಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಸಂಪುಟದ ಸಚಿವರೇ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದರು.