Homeಪ್ರಮುಖ ಸುದ್ದಿ
ವಯನಾಡು, ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿಗೆ ಭರ್ಜರಿ ಗೆಲುವು
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ವದು, ವಯನಾಡು ಮತ್ತು ರಾಯ್ ಬರೇಲಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿಯವರು 530498 ಮತಗಳು ಪಡೆದಿದ್ದಾರೆ. ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಅನ್ನಿ ರಾಜ ಅವರು 239460 ವೋಟ್ ತೆಗೆದುಕೊಂಡಿದ್ದಾರೆ. ಬಿಜೆಪಿಯ ಕೆ. ಸುರೇಂದ್ರನ್ ಅವರು 1 ಲಕ್ಷ ಮತ ಗಳಿಸಿದ್ದಾರೆ. ಇನ್ನೊಂದೆಡೆ ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿಗೆ 382467 ಮತಗಳು ಲಭಿಸಿವೆ. ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರು 170104 ಮತ ಪಡೆದುಕೊಂಡಿದ್ದಾರೆ. ಕಳೆದ ಸಲ ರಾಹುಲ್ ಅಮೇಥಿ ಹಾಗೂ ವಯನಾಡಿನಲ್ಲಿ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತರೂ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡಿನ ಜನ ಗೆಲ್ಲಿಸಿದ್ದರು.