Homeಪ್ರಮುಖ ಸುದ್ದಿ

ಬಿಜೆಪಿ ವಿರುದ್ದ ಅಪಪ್ರಚಾರ ಕೇಸ್‌: ರಾಹುಲ್ ಗಾಂಧಿಗೆ ಷರತ್ತು ಬದ್ದ ಜಾಮೀನು

ಬೆಂಗಳೂರು: ಬಿಜೆಪಿ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚ ಸ್ಸಿಗೆ ಧಕ್ಕೆ ತಂದ ಆರೋ ಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಸ್ಥಳೀಯ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಈ ಸಂಬಂಧ ರಾಹುಲ್ ಗಾಂಧಿ ಬೆಳಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾದರು. ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್.ಕೇಶವಪ್ರಸಾದ್ ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ 42ನೇ ಎಸಿಎಂ ಎಂ ಕೋ ರ್ಟ್‌ ವಿಚಾರಣೆಗೆ ಅಂಗೀಕರಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಕಳೆದ ವಿಚಾರಣೆಗಳಲ್ಲಿ ಖುದ್ದು ಹಾಜರಿಯಿಂದ ವಿನಾಯ್ತಿ ಪಡೆದಿದ್ದ ರಾಹುಲ್ ಬೆಳಗ್ಗೆ 10.50ಕ್ಕೆ ಕೋ ರ್ಟ್ ಗೆ ಹಾಜರಾದರು.

ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆರೋಪಿಯ ಹಾಜರಿಯನ್ನು ದಾಖಲಿಸಿಕೊಂಡು ₹ 50 ಸಾವಿರ ಬಾಂಡ್ ಮತ್ತು ಒಬ್ಬರ ಶ್ಯೂರಿಟಿ ಆಧಾರದಲ್ಲಿ ಜಾಮೀನು
ಮಂಜೂರು ಮಾಡಿದರು. ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಲಾಗಿದೆ.

2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳೆ ಕರ್ನಾಟಕ ಪ್ರದೇ ಶ ಕಾಂಗ್ರೆಸ್ ಪಕ್ಷವು ರಾಷ್ಟ್ರೀ ಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾ ರ ಶೇ 40ರಷ್ಟು ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ ಎಂ ದು ಆರೋಪಿಸಿದ್ದರು. ‘ಈ ಆರೋ ಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂ ದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವ ಗ್ರಹ ಪೀ ಡಿತ ಮತ್ತು ಮಾನಹಾನಿಕರ ಆರೋ ಪ ಎಂದು ಖಾಸಗಿ ದೂರು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿ. ಎರಡನೇ ಆರೋಪಿ ಡಿ.ಕೆ.ಶಿವಕುಮಾರ್.ಮೂರನೇ ಆರೋಪಿ ಸಿದ್ದರಾಮಯ್ಯ ಹಾಗೂ ನಾಲ್ಕನೇ ಆರೋಪಿಯಾಗಿ
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಇದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button