Homeಜನಮನಪ್ರಮುಖ ಸುದ್ದಿ

ಲೋಕಸಭೆಯಲ್ಲಿ ಕೇರಳ ಭೂಕುಸಿತ ಸಂತ್ರಸ್ತರಿಗೆ ಪರಿಹಾರಕ್ಕೆ ರಾಹುಲ್ ಗಾಂಧಿ ಆಗ್ರಹ

ನವದೆಹಲಿ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಕೂಡಲೇ ಎಲ್ಲ ರೀತಿಯ ನೆರವು ನೀಡಬೇಕು. ಮೃತಪಟ್ಟವರ ಕುಟುಂಬಗಳಿಗೆ ಶೀಘ್ರದಲ್ಲಿ ಪರಿಹಾರ ದೊರಕಿಸಬೇಕು, ಪರಿಹಾರ ಶಿಬಿರಗಳನ್ನು ಕೂಡಲೇ ತೆರೆಯಬೇಕು ಎಂದು ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಹೇಳಿದ್ದಾರೆ.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಭೂಕುಸಿತದಲ್ಲಿ 70ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ದುರಂತದ ಹಾನಿಯ ಪ್ರಮಾಣವನ್ನು ಇನ್ನೂ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ತಿಳಿಸಿದರು. ವಯನಾಡು ಮತ್ತು ಪಶ್ಚಿಮ ಘಟ್ಟಗಳ ಅನೇಕ ಪ್ರದೇಶಗಳಲ್ಲಿ ಭೂಕುಸಿತಗಳು ಮೇಲಿಂದ ಮೇಲೆ ಸಂಭವಿಸುತ್ತಿವೆ.

ಕಳೆದ ಕೆಲವು ವರ್ಷಗಳಲ್ಲಿ ದೇಶ ಭೂಕುಸಿತಗಳಲ್ಲಿ ಅಪಾಯಕಾರಿ ಏರಿಕೆ ಕಂಡಿದೆ. ಭೂಕುಸಿತ ಪೀಡಿತ ಪ್ರದೇಶಗಳ ಮ್ಯಾಪಿಂಗ್‌ನ ತುರ್ತು ಅವಶ್ಯಕತೆಯಿದೆ, ಇಂತಹ ನೈಸರ್ಗಿಕ ವಿಕೋಪಗಳನ್ನು ಎದುರಿಸಲು ಕ್ರಿಯಾ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button