ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ!
ಗಾಂಧಿ ನಾಡಿನಲ್ಲಿ ರಾಹುಲ್ ಗಾಂಧಿಗೆ ಮುಖಭಂಗ!
ನೆರೆಪ್ರವಾಹ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ, ಕಾಂಗ್ರೆಸ್ಸಿನ ಯುವರಾಜ ಇಂದು ಗುಜರಾತಿನ ಬನಸ್ಕಾಂತ ಜಿಲ್ಲೆಗೆ ಭೇಟಿ ನೀಡಿದ್ದರು. ಆದರೆ, ನೆರೆಪ್ರವಾಹದ ಸಂದರ್ಭದಲ್ಲಿ ಗುಜರಾತಿನ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟಿನಲ್ಲಿ ಬಿಡಾರ ಹೂಡಿದ್ದಕ್ಕೆ ಅಲ್ಲಿನ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವಿಲ್ಲಿ ಬದುಕಿಗಾಗಿ ಹೋರಾಟ ನಡೆಸುತ್ತಿದ್ದೇವೆ. ನಿಮ್ಮ ಕಾಂಗ್ರೆಸ್ ಪಕ್ಷದ ಶಾಸಕರು ಕರ್ನಾಟಕದಲ್ಲಿ ಮಜಾ ಮಾಡುತ್ತಿದ್ದಾರೆ. ಅಹ್ಮದ್ ಪಟೇಲ್ ರನ್ನು ರಾಜ್ಯಸಭೆಗೆ ಕಳುಹಿಸುವುದೇ ನಿಮ್ಮ ಪಕ್ಷಕ್ಕೆ ಮುಖ್ಯವಾಯಿತಲ್ಲವೇ ಎಂದು ಪ್ರಶ್ನಿಸಿದ್ದಾರೆನ್ನಲಾಗಿದೆ.
ಮತ್ತೊಂದು ಕಡೆ ಜನಾಕ್ರೋಶ ಭುಗಿಲೆದ್ದಿದ್ದು ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲುತೂರಾಟ ಮಾಡಲಾಗಿದೆ. ಪರಿಣಾಮ ರಾಹುಲ್ ಕಾರಿನ ಗಾಜು ಪುಡಿಪುಡಿಯಾಗಿದೆ. ಕಪ್ಪು ಬಾವುಟ ಪ್ರದರ್ಶಿಸಿ ಭದ್ರತಾ ಸಿಬ್ಬಂದಿ ಮೇಲೂ ದಾಳಿ ನಡೆಸಲಾಗಿದ್ದು ಇಬ್ಬರು ಎಸ್ ಪಿಜಿ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದೇ ವೇಳೆ ಕೆಲವರು ಪ್ರಧಾನಿ ನರೇಂದ್ರ ಮೋದಿ ಪರ ಜೈಕಾರ ಹಾಕಿದ್ದಾರೆ ಎನ್ನಲಾಗಿದೆ.
Good news ,pls update local news also
Good news friend.