Homeಪ್ರಮುಖ ಸುದ್ದಿ
ರಾಜ್ಯದ 8 ಜಿಲ್ಲೆಗಳಲ್ಲಿ ಇಂದಿನಿಂದ ಭರ್ಜರಿ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಬಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗಂಟೆಯ 40-50 ಕಿ.ಲೋ ಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆ ಸೂಚನೆ ಇದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಯಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯ ಬೀಳುವ ಸಂಭವ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳದಲ್ಲೂ ಮಳೆ ಆಗಲಿದೆ. ಬೆಂಗಳೂರಿನಲ್ಲಿಯೂ ಜೂನ್ 20ರವರೆಗೆ ಸಾಧರಣ ಮಳೆ ಬೀಳುವ ಸಂಭವ ಇದೆ.
ಸಂಜೆ ಬಳಿಕ ಬೆಂಗಳೂರಿನಲ್ಲಿ ಎಂದಿನಂತೆ ಮಳೆಯ ಮುನ್ಸೂಚನೆ ಇದೆ. ಕಳೆದ ಎರಡು ದಿನದಿಂದ ನಗರದಲ್ಲಿ ಗಣನೀಯವಾಗಿ ಉಷ್ಣಾಂಶ ಇಳಿಕೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.