Homeಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ಲಿಂಗತ್ವ ಅಲ್ಪಸಂಖ್ಯಾತರಿಗೆ ಗುಡ್‌ ನ್ಯೂಸ್‌ : ʻಗೃಹಲಕ್ಷ್ಮಿʼ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಇಷ್ಟು ದಿನ ಮಹಿಳೆಯರಿಗೆ 2000 ನೀಡುತ್ತಾ ಬಂದಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ಇನ್ನು ಮುಂದೆ ಅವರ ಖಾತೆಗೆ 2,000 ಹಣ ಬರಲಿದೆ.

ಲಿಂಗತ್ವ ಅಲ್ಪಸಂಖ್ಯಾತರಿಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ ನೀಡಲಾಗಿದ್ದು, ರಾಜ್ಯ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ. ಅದರಂತೆ ಇನ್ನು ಮುಂದೆ ಮಹಿಳೆಯರ ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಅಡಿ ಅವರ ಖಾತೆಗೆ 2000 ಹಣ ಬಂದು ಬೀಳಲಿದೆ. ಅದರಿಂದ ಸಹಜವಾಗಿ ಲಿಂಗತ ಅಲ್ಪಸಂಖ್ಯಾತರ ಆರ್ಥಿಕ ಮಟ್ಟ ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಲಿಂಗತ್ವ ಅಲ್ಪಸಂಖ್ಯಾತ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮೀ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವಾಗ Na- tional Portal For Transgender Persons ವತಿ ಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ.

ಜು.8ರಿಂದ ಲಿಂಗತ್ವ ಅಲ್ಪಸಂಖ್ಯಾತರು ವಾಸವಾಗಿರುವ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ತೆರಳಿ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವೇಳೆ ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ, ಪಾಸ್ ಪೋರ್ಟ್ ಅಳತೆಯ ಫೋಟೊ ಮತ್ತು ಆಧಾರ್ ಕಾರ್ಡ್ನ್ನು ಕಡ್ಡಾಯ ವಾಗಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button