ಪ್ರಮುಖ ಸುದ್ದಿ
ರಾಜ್ಯದಲ್ಲಿ 24 ಗಂಟೆಯಲ್ಲಿ ಭಾರಿ ಮಳೆ ಮುನ್ಸೂಚನೆ
ರಾಜ್ಯದಲ್ಲಿ 24 ಗಂಟೆಯಲ್ಲಿ ಭಾರಿ ಮಳೆ ಮುನ್ಸೂಚನೆ
ವಿವಿ ಡೆಸ್ಕ್ಃ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಸೇರಿದಂತೆ ಹಲವಡೆ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ ಎನ್ನಲಾಗಿದೆ.
ಚಿಕ್ಕಮಗಳೂರ, ಹಾಸನ, ಕೊಡಗು, ಮೈಸೂರ, ಮಂಡ್ಯ, ತುಮಕೂರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೀದರ, ಗದಗ, ಹಾವೇರಿ, ಕೊಪ್ಪಳ, ಕಲ್ಬುರ್ಗಿ, ಧಾರವಾಡ, ಬೆಳಗಾವಿ ಸೇರಿದಂತೆ ಹಲವಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಲಾಗಿದೆ.