Homeಪ್ರಮುಖ ಸುದ್ದಿ
ರಾಜಸ್ತಾನದ ನಾಲ್ಕು ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ; ಪೊಲೀಸರ ತಪಾಸಣೆ
ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ.
ಪೊಲೀಸರೊಂದಿಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಬಾಂಬ್ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಪೊಲೀಸ್ ಕಮಿಷನರ್ ಇಮೇಲ್ ಬೆದರಿಕೆಗಳನ್ನು ದೃಢಪಡಿಸಿದ್ದಾರೆ. ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸುವವರನ್ನು ಪತ್ತೆಹಚ್ಚಲು ಪ್ರಯತ್ನ ನಡೆಯುತ್ತಿದೆ.