Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ರೇಷನ್ ಕಾರ್ಡ್‌ನಲ್ಲಿ ಹೊಸ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಸರ್ಕಾರ ಅವಕಾಶ
ರೇಷನ್ ಕಾರ್ಡ್‌ನಲ್ಲಿ ಹೊಸ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಸರ್ಕಾರ ಅವಕಾಶ ನೀಡಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಆ. 10ರವರೆಗೆ ಆಹಾರ ಇಲಾಖೆ ಅವಕಾಶ ನೀಡಿದೆ.
ಆನ್‌ಲೈನ್ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು.ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ (10AM-5PM) ತಿದ್ದುಪಡಿ ಮಾಡಿಕೊಳ್ಳಬಹುದು. ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರು ಆಧಾರ್ ಕಾರ್ಡ್ ಪ್ರತಿ, ಹೊಸ ಹೆಸರು ಸೇರ್ಪಡೆಗೆ ಜಾತಿ & ಆದಾಯ ಪ್ರಮಾಣ ಪತ್ರ, ಮೊಬೈಲ್ ನಂ & ಹಾಲಿ ಪಡಿತರ ಚೀಟಿ ದಾಖಲೆ ಇಟ್ಟುಕೊಂಡಿರಬೇಕು.