ಪ್ರಮುಖ ಸುದ್ದಿ
24 ಗಂಟೆಯಲ್ಲಿ ಹಲವಡೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ
ಮುಂದಿನ 24 ಗಂಟೆಯಲ್ಲಿ ಹಲವಡೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್
ಬೆಂಗಳೂರಃ ರಾಜ್ಯದ ಹಲವಡೆ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಕೆಲವಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಜಾಸ್ತಿ ಮಳೆಯಾಗಲಿದೆ ಎನ್ನಲಾಗಿದೆ.
ಯಲ್ಲೋ ಅಲರ್ಟ್- ಬೆಂಗಳೂರ ಸೇರಿದಂತೆ ಬೀದರ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಕೊಡಗು, ಮಂಡ್ಯ, ರಾಮನಗರ, ಮೈಸೂರ, ಶಿವಮೊಗ್ಗ, ತುಮಕೂರಿನಲ್ಲಿ ಜುಲೈ 10 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.