ಪ್ರಮುಖ ಸುದ್ದಿ
ಸಚಿವ ಸ್ಥಾನಕ್ಕಾಗಿ ಒಂದು ತಿಂಗಳ ಗಡುವು ನೀಡಿದ ಶಾಸಕ ಬಿ.ಸಿ.ಪಾಟೀಲ್
ಹಿರೇಕೆರೂರು : ಒಂದು ತಿಂಗಳು ಕಾಲ ಮಾತ್ರ ಕಾಯುತ್ತೇನೆ ಸಚಿವ ಸ್ಥಾನ ನೀಡದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಾಸಕ ಬಿ.ಸಿ. ಪಾಟೀಲ ಹೇಳಿದರು. ಮತದಾರರಿಗೆ ಅಭಿನಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು ನಾನು ಸಚಿವನಾಗಲು ಅರ್ಹ ವ್ಯಕ್ತಿ. ಆದರೂ, ನನಗೇಕೆ ಸಚಿವ ಸ್ಥಾನ ನೀಡಲಿಲ್ಲ ಎಂಬುದು ತಿಳಿಯುತ್ತಿಲ್ಲ. ನನಗೆ ಸಚಿವ ಸ್ಥಾನ ಸಿಗಬಹುದು ಎಂಬ ಭರವಸೆ ಇತ್ತು. ಹಾವೇರಿ, ಗದಗ, ಧಾರವಾಡ ಭಾಗದ ಏಕೈಕ ಲಿಂಗಾಯತ ಶಾಸಕ ನಾನು ಎಂದು ತಿಳಿಸಿದರು.
ಪಟ್ಟಣದ ಗುರುಭವನದಲ್ಲಿ ಹಿರೇಕೆರೂರು-ರಟ್ಟೀಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮತದಾರರಿಗೆ ಅಭಿನಂದನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕ ಪಾಟೀಲ್ ಮಾತನಾಡಿದರು. ನನ್ನ ಕ್ಷೇತ್ರ ಮತ್ತು ನನ್ನ ಜಿಲ್ಲೆಯ ಅಭಿವೃದ್ಧಿಗಾಗಿ ನನಗೆ ಸಚಿವ ಸ್ಥಾನ ನೀಡಬೇಕಿತ್ತು. ನಾನು ಯಾವುದೇ ಬಣಕ್ಕೆ ಸೇರಿದವನಲ್ಲ, ಹೈಕಮಾಂಡ್ ನನಗೆ ಸಚಿವ ಸ್ಥಾನ ನೀಡುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದರು.