ಪ್ರಮುಖ ಸುದ್ದಿ
ಮೋದಿ ಸರ್ಕಾರದ ದಿಟ್ಟ ಹೆಜ್ಜೆಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಶಂಸೆ
ನವದೆಹಲಿ : ಜಮ್ಮು ಕಾಶ್ಮೀರಕ್ಕೆ ನೀಡಿದ್ದ 370ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ರಾಜಕೀಯ ಮತ್ತು ಒಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ದೇಶದ ಪ್ರತಿಯೊಬ್ಬರೂ ಸ್ವಾಗತಿಸುವಂತದ್ದಾಗಿದೆ ಎಂದು ನರೇಂದ್ರ ಮೋದಿ ಸರ್ಕಾರದ ಕ್ರಮವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ ಭಾಗವತ್ ಅವರು ಪ್ರಶಂಸಿದ್ದಾರೆ. ದೇಶದ ಹಿತಾಸಕ್ತಿಯಿಂದ ದಿಟ್ಟ ಕ್ರಮವನ್ನು ಕೈಗೊಂಡಿರುವ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.