ಪ್ರಮುಖ ಸುದ್ದಿ

ಮಳಿಗೆಗಳಲ್ಲಿ ಅವಧಿ ಮೀರಿದ ಪದಾರ್ಥಗಳ ಮಾರಾಟ – ಸಿಎಂ ಸೂಚನೆ ಬೆನ್ನಲ್ಲೇ ಅಧಿಕಾರಿಗಳಿಂದ ಸೂಕ್ತ ಕ್ರಮ

ಬೆಂಗಳೂರು:ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಹಿನ್ನಲೆ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕ್ರಮಕೈಗೊಂಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಸಿಎಂ
ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ.

ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ ಎಂದು ತಿಳಿಸಲಾಗಿದೆ.

ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button