Homeಅಂಕಣಪ್ರಮುಖ ಸುದ್ದಿವಿನಯ ವಿಶೇಷ

ಅಧಿಕ ಉಪ್ಪು ಸೇವನೆ ಮಾಡುತ್ತೀರಾ ಹಾಗಿದ್ರೆ ಈ ಸಮಸ್ಯೆಗಳು ನಿಮ್ಮನ್ನು ಕಾಡಬಹುದು ಎಚ್ಚರ!

ಹೆಚ್ಚಿನ ಜನರು ಅಗತ್ಯಕ್ಕಿಂತ ಹೆಚ್ಚು ಉಪ್ಪನ್ನು ಸೇವಿಸುತ್ತಾರೆ. ಇದರಿಂದಾಗಿ ಅನೇಕರು ಅಧಿಕರಕ್ತದೊತ್ತಡದಂತಹ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪ್ರತಿ ವ್ಯಕ್ತಿಗೆ ಬೇಕಾಗುವ ಉಪ್ಪಿನ ಪ್ರಮಾಣವು ಅವರ ದೈಹಿಕ ಚಟುವಟಿಕೆಗಳನ್ನು ಅವಲಂಬಿಸಿ ವಿಭಿನ್ನವಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳುತ್ತದೆ. ಇದಲ್ಲದೆ, ಇದು ಮೂಳೆಗಳ ನಷ್ಟ ಮತ್ತು ಮೆಮೊರಿ ಪವರ್ ವೀಕ್ ಆಗೋದಕ್ಕೂ ಕಾರಣವಾಗಿದೆ. ಉಪ್ಪನ್ನು ಸೇವಿಸುವುದು ಮುಖ್ಯವಾದರೂ, ಅದರ ಅತಿಯಾದ ಸೇವನೆಯು ದೇಹದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ. ಆದ್ದರಿಂದ, ಆಹಾರದಲ್ಲಿ ಅಗತ್ಯವಾದ ಪ್ರಮಾಣದ ಮಾತ್ರ ಸೇರಿಸಬೇಕು.

ವಿಶ್ವಸಂಸ್ಥೆಯ ಪ್ರಕಾರ ಸಾಮಾನ್ಯವಾಗಿ ವಯಸ್ಕ ವ್ಯಕ್ತಿಯು 5 ಗ್ರಾಂ ಗಿಂತ ಕಡಿಮೆ ಅಂದರೆ ಒಂದು ಟೀಚಮಚಕ್ಕಿಂತ ಕಡಿಮೆ ಉಪ್ಪನ್ನು ಸೇವಿಸಬೇಕು. ಹಾಗೂ ಮಕ್ಕಳಿಗೆ ಇದಕ್ಕಿಂತಲೂ ಕಡಿಮೆ ಪ್ರಮಾಣದ ಉಪ್ಪು ಸೇವಿಸಬೇಕು. ಅಧಿಕ ಉಪ್ಪು ಸೇವನೆಯಿಂದ ಬಾಧಿಸುವ ಆರೋಗ್ಯ ಸಮಸ್ಯೆಗಳು: ರಕ್ತದೊತ್ತಡ: ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇರಿಸುವುದರಿಂದ ವ್ಯಕ್ತಿಗೆ ಅಧಿಕ ರಕ್ತದೊತ್ತಡದ ಸಮಸ್ಯೆ ಕಾಡಬಹುದು. ಅದಕ್ಕಾಗಿಯೇ ಆರೋಗ್ಯ ತಜ್ಞರು ಆಹಾರದಲ್ಲಿ ಉಪ್ಪನ್ನು ಮಿತ ಪ್ರಮಾಣದಲ್ಲಿ ಬಳಸಬೇಕೆಂದು ಸಲಹೆ ನೀಡುತ್ತಾರೆ. ಹೃದಯದ ಆರೋಗ್ಯ: ಅತಿಯಾದ ಉಪ್ಪು ಸೇವನೆಯು ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಹೃದಯವನ್ನು ಆರೋಗ್ಯಕರವಾಗಿಡಲು ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಮಿತಿಗೊಳಿಸಿ. ನೀವು ದಿನಕ್ಕೆ ಐದು ಗ್ರಾಂ ಗಿಂತ ಕಡಿಮೆ ಉಪ್ಪನ್ನು ಸೇವಿಸಿದರೆ, ಅದು ನಿಮ್ಮ ಹೃದಯ ಕಾಯಿಲೆ, ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ನಿರ್ಜಲೀಕರಣ: ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ, ನಿರ್ಜಲೀಕರಣ ಸಮಸ್ಯೆಯನ್ನು ತಪ್ಪಿಸಲು ಆಹಾರದಲ್ಲಿ ಮಿತ ಪ್ರಮಾಣದ ಉಪ್ಪನ್ನು ಸೇರಿಸುವುದರೊಂದಿಗೆ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಿರಿ.

ಊತ: ದೇಹದಲ್ಲಿ ಉಪ್ಪಿನ ಪ್ರಮಾಣ ಹೆಚ್ಚಾದಾಗ ದೇಹದಲ್ಲಿ ನೀರು ವಿಪರೀತವಾಗಿ ಶೇಖರಣೆಯಾಗುತ್ತದೆ.ಇದರಿಂದಾಗಿ . ಕೈ, ಕಾಲು ಮತ್ತು ಕಣಕಾಲುಗಳಲ್ಲಿ ಊತದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ನಿಮ್ಮನ್ನು ಕಾಡಬಾರದೆಂದರೆ, ಉಪ್ಪನ್ನು ಮಿತಪ್ರಮಾಣದಲ್ಲಿ ಸೇವಿಸಿ.

ಕಿಡ್ನಿ ಸಮಸ್ಯೆ: ಅತಿಯಾದ ಉಪ್ಪು ಸೇವನೆಯು ಕಿಡ್ನಿಯನ್ನು ಹಾನಿಗೊಳಿಸಿ ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು. ಉಪ್ಪಿನ ಅತಿಯಾದ ಸೇವನೆಯು ಮೂತ್ರದಲ್ಲಿ ಕ್ಯಾಲ್ಸಿಯಂ ಮಟ್ವವನ್ನು ಹೆಚ್ಚಿಸುತ್ತದೆ, ಇದು ಮೂತ್ರಪಿಂಡದ ಕಲ್ಲುಗಳ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಆರೋಗ್ಯಕ್ಕೆ ಉಪ್ಪು ಬಹಳ ಮುಖ್ಯ. ಆದರೆ ಅದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಕೂಡಾ ಅಷ್ಟೇ ಮುಖ್ಯ.

Related Articles

Leave a Reply

Your email address will not be published. Required fields are marked *

Back to top button