ಸಾಹಿತ್ಯ
83ನೇ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ: 84ನೇ ಸಮ್ಮೇಳನ ಎಲ್ಲಿ ಗೊತ್ತಾ?
ಮೈಸೂರು: ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದ ಬೇಡನ್ ಪೊವೆಲ್ ಶಾಲೆಯ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ ನಡೆಯಿತು. ಈ ವೇಳೆ 84ನೇ ಸಾಹಿತ್ಯ ಸಮ್ಮೇಳನ ಆಯೋಜಿಸುವ ಬಗ್ಗೆ ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಧಾರವಾಡ ಜಿಲ್ಲೆಗಳ ನಡುವೆ ಭಾರೀ ಪೈಪೋಟಿ ನಡೆಯಿತು. ಕೊನೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಸಮ್ಮೇಳನ ಆಯೋಜಿಸುವ ಬಗ್ಗೆ ಹೆಚ್ಚಿನ ಒಲವು ವ್ಯಕ್ತವಾದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಮುಂದಿನ ಸಮ್ಮೇಳನ ಆಯೋಜಿಸಲು ನಿರ್ಣಯಿಸಲಾಗಿದೆ ಎಂದು ತಿಳಿದು ಬಂದಿದೆ.
ಕಸಾಪ ಅದ್ಯಕ್ಷ ಮನು ಬಳಿಗಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಕಸಾಪ ಅದ್ಯಕ್ಷರು, ರಾಜ್ಯ ಪದಾಧಿಕಾರಿಗಳು ಭಾಗಿಯಾಗಿದ್ದರು. ಇಂದು 83ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದ್ದು ಸಮ್ಮೇಳನ ವೇದಿಕೆಯಲ್ಲಿ ಕಸಾಪ ಅದ್ಯಕ್ಷ ಮನು ಬಳಿಗಾರ ಮುಂದಿನ ಸಮ್ಮೇಳನ ಧಾರವಾಡದಲ್ಲಿ ನಡೆಯಲಿದೆ ಎಂದು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಕಸಾಪ ಮೂಲಗಳಿಂದ ತಿಳಿದು ಬಂದಿದೆ.