ಬಂಜಾರ ಸಮಾಜದ್ದು ರಾಷ್ಟ್ರದಲ್ಲಿಯೇ ಶ್ರೇಷ್ಠ ಸಂಸ್ಕೃತಿ – DC ಡಾ.ಸುಶೀಲ
ಶ್ರೀ ಸಂತ ಸೇವಾಲಾಲ ಮಹರಾಜರ ಜಯಂತ್ಯುತ್ಸವ
ಶ್ರೀ ಸಂತ ಸೇವಾಲಾಲ ಮಹರಾಜರ ಜಯಂತ್ಯುತ್ಸವ
ಬಂಜಾರ ಸಮಾಜದ್ದು ರಾಷ್ಟ್ರದಲ್ಲಿಯೇ ಶ್ರೇಷ್ಠ ಸಂಸ್ಕೃತಿ – ಡಾ.ಸುಶೀಲ ಬಿ.
ಯಾದಗಿರಿಃ ರಾಷ್ಟ್ರದಲ್ಲಿಯೇ ಅತೀ ಶ್ರೇಷ್ಠ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿದ ಸಮಾಜ ಬಂಜಾರ. ಅತ್ಯಂತ ಶ್ರಮಜೀವಿ ಮತ್ತು ಪ್ರಾಮಾಣಿಕತೆಯಾಗಿ ಬದುಕಬೇಕೆಂದು ಸಂತ ಸೇವಾಲಾಲರು ಸಾರಿದ ಮೌಲ್ಯಗಳನ್ನು ನಾವೆಲ್ಲ ಮೈಗೂಡಿಸಿಕೊಂಡು ಬದುಕಬೇಕಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಸಂತ ಸೇವಲಾಲ ಜಯಂತ್ಯುತ್ಸವ ಸಮಿತಿ ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಸಂತರ ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಲಂಬಾಣಿ ಸಮುದಾಯ ಸಾವಿರಾರು ವರ್ಷಗಳಿಂದ ನಗರ ಮತ್ತು ಗ್ರಾಮೀಣ ಜೀವನಗಳಿಂದ ದೂರವಿದ್ದು, ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಇವರಲ್ಲಿನ ಅಜ್ಞಾನ ಅಂಧಕಾರಗಳನ್ನು ದೂರ ಮಾಡಿ ಜ್ಞಾನ ಮಾರ್ಗ ತೋರಿದ ಸೇವಾಲಾಲರನ್ನು ಬಂಜಾರರು ಮೋತಿವಾಳು ಅಥವಾ ಲಾಲ ಮೋತಿ ಎಂದು ಕರೆಯುತ್ತಿದ್ದರು. ಮುಂಬೈಯ ಸ್ಮಿತ್ ಭಾವುಚಾ ಎಂಬಲ್ಲಿ ಪೆÇೀರ್ಚುಗೀಸರ ಹಡಗು ಸಿಕ್ಕಿಹಾಕಿಕೊಂಡಾಗ ಅದನ್ನು ತಮ್ಮ ಜಾಣತನದಿಂದ ದಡ ಸೇರಿಸಿದ ಸೇವಾಲಾಲರಿಗೆ ಪೆÇೀರ್ಚುಗೀಸರು ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು. ಆದ್ದರಿಂದಲೇ ಇವರನ್ನು ಮೋತಿವಾಳೋ ಎಂದು ಕರೆಯುತ್ತಿದ್ದರು.
ಸಂತ ಸೇವಾಲಾಲ ಅವರು ಬಂಜಾರ ಸಮಾಜದ ಒಂದು ಶಕ್ತಿ ಬೆಳಕು ಆಗಿದ್ದಾರೆ. ಅವರ ಮೌಲ್ಯ, ಸಮಾಜಮುಖಿ ಕಾರ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.
ಜಿಲ್ಲಾ ಪಂಚಾಯತ ಸಿಇಓ ಗರಿಮಾ ಪನ್ವಾರ ಅವರು ಮಾತನಾಡಿ, ಲಂಬಾಣಿ ಸಮಾಜಕ್ಕೆ ಲದೇಣಿಯ ಎಂದು ಕರೆಯಲಾಗುತ್ತದೆ ಅಂದ್ರೆ ವಲಸೆ ಹೋಗುವವರು. ಅದರಂತೆ ನಮ್ಮ ಸರ್ಕಾರಿ ನೌಕರರು ಜಿಲ್ಲೆಯಿಂದ ಜಿಲ್ಲೆ, ರಾಜ್ಯದಿಂದ ರಾಜ್ಯಕ್ಕೆ ಕೆಲಸಕ್ಕೆ ವಲಸೆ ಹೋಗುತ್ತಾ ಬಂಜಾರ ಸಮಾಜದಂತೆ ನವೀನ ಬಂಜಾರ ಸಮುದಾಯದಂತೆ ನಾವು ಆಗಿದ್ದೇವೆ ಎಂದರು.
ಸಂತ ಸೇವಾಲಾರ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದರು. ಪ್ರಾಮಾಣಿಕರಾಗಿ ಜೀವಿಸಿ, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿರಿ ಎಂದು ತಿಳಿಸಿದ್ದಾರೆ. ಇವರ ಆದರ್ಶಗಳನ್ನು ಪಾಲಿಸೋಣ ಎಂದು ನುಡಿದರು.
ಇದೇ ವೇಳೆ ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಅಭಿವೃದ್ಧಿ ಅಧಿಕಾರಿ ವೆಂಕಟೇಶ ಚವ್ಹಾಣ ಹಾಗೂ ಕಾಡಂಗೇರಾ ಮೊರಾರ್ಜಿ ವಸತಿ ಶಾಲೆಯ ಶಿಕ್ಷಕರಾದ ರಾಜು ರಾಠೋಡ್ ಅವರು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಜಯಂತಿ ಸಮಿತಿ ಜಿಲ್ಲಾಧ್ಯಕ್ಷ ದೇವರಾಜ ಎಲ್.ನಾಯಕ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿ ಉತ್ತರಾದೇವಿ ಮಠಪತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ, ಕೃಷಿ ಇಲಾಖೆಯ ಅಧಿಕಾರಿ ರಾಜಕುಮಾರ ಹಾಗೂ ಸಮಾಜದ ಮುಖಂಡರಾದ ತೇಜರಾಜ್ ರಾಠೋಡ್, ಪರಶುರಾಮ ಚವ್ಹಾಣ್, ವಕೀಲರಾದ ಗೋವಿಂದ ಬಿ ಜಾಧವ್, ಚಂದ್ರಶೇಖರ ಜಾಧವ್, ಮುಖಂಡ ಕಿಶನ್ ರಾಠೋಡ್ ಅಲ್ಲಿಪುರ, ರಾಮುನಾಯಕ, ರವಿ ಮುದ್ನಾಳ, ವಿನೋದ್ ಕೆ ರಾಠೋಡ್, ಶಂಕರ ರಾಠೋಡ್, ವಿಜಯ್ ಜಾಧವ್ ಜಿನಕೇರಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.