ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲಃ ಎಂ.ಬಿ.ಪಾಟೀಲ್ ಸ್ಪಷ್ಟನೆ
ಕೆಪಿಸಿಸಿ ಅಧ್ಯಕ್ಷ ಪಟ್ಟದ ಮೇಲೆ ಯಾರ ಕಣ್ಣಿದೆ.?
ಬೆಂಗಳೂರಃ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ರಚನೆ ಸರ್ಕಸ್ ಕೊನೆ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಹಲವರು ಅಸಮಾಧಾನ ಹೊರ ಹಾಕುತ್ತಿದ್ದಾರೆ.
ಅದರಲ್ಲೂ ಕಾಂಗ್ರೆಸ್ ಪಕ್ಷದ ಹಿಂದಿನ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವಾರು ಪ್ರಮುಖರಿಗೆ ಸಚಿವಸ್ಥಾನ ದೊರೆಯದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಂ.ಬಿ.ಪಾಟೀಲ್, ನನಗೆ ಸಚಿವ ಸ್ಥಾನ ಯಾವ ಕಾರಣಕ್ಕಾಗಿ ಕೈಚಲ್ಲಿದೆ ಎಂಬುದು ನನಗೆ ತಿಳಿದಿಲ್ಲ. ನಮ್ಮ ನಾಯಕರಾದ ಸಿದ್ರಾಮಯ್ಯ ನವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಮಾತನಾಡುತ್ತೇನೆ ಎಂದು ಉತ್ತರಿಸಿದ ಅವರು, ಸಚಿವ ಸಂಪುಟದಿಂದ ನನ್ನ ಕೈಬಿಡಲು ಕಾರಣ ತಿಳಿದಿಲ್ಲ. ಒಳಗಡೆ ಏನು ನಡೆದಿದೆ ಎಂಬುದು ಗೊತ್ತಿಲ್ಲ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿದ್ದಿರಾ.? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ , ಇಲ್ಲ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲವೆಂದು ಸ್ಪಷ್ಟಪಡಿಸಿದರು.
ಆದರೆ ಕಾಂಗ್ರೆಸ್ ಅಧ್ಯಕ್ಷ ಗಾದಿಗಾಗಿ ಒಳಗೊಳಗೆ ಗುದ್ದಾಟ ನಡೆದಿದೆ ಎನ್ನಲಾಗಿದ್ದು, ಸಚಿವ ಸಂಪುಟದಿಂದ ಎಂ.ಬಿ.ಪಾಟೀಲ್. ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮತ್ತು ಡಿಕೆಶಿ ಸಚಿವ ಸಂಪುಟ ಸೇರಿರುವದರಿಂದ, ಪಾಟೀಲ್ ಮಾಜಿ ಸಿಎಂ ಸಿದ್ರಾಮಯ್ಯನವರ ಮೂಲಕ ಅಧ್ಯಕ್ಷ ಪಟ್ಡ ಏರಲು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.