ನೇಕಾರ ಸಮ್ಮಾನ್ ಯೋಜನೆ: ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5,000
![](https://vinayavani.com/wp-content/uploads/2024/08/download-11-7-780x470.jpg)
(scheme:) 2024- 25 ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ 5000 ಆರ್ಥಿಕ ನೆರವು ರಾಜ್ಯ ಸರ್ಕಾರ ನೀಡುತ್ತಿದ್ದು, ಅರ್ಹ ಹಾಗೂ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024- 25 ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/-ಗಳ ಆರ್ಥಿಕ ನೇರವನ್ನು ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಹಾಗಾದರೆ ಅರ್ಜಿ ಸಲ್ಲಿಕೆ ಎಲ್ಲಿ?;
ಆಸಕ್ತ ಹಾಗೂ ಅರ್ಹರು ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಬೆಂಗಳೂರು ನಗರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕೈಮಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರರು ಹಾಗೂ ಕಾರ್ಮಿಕರು ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಎಸ್.ಜೆ.ಪಿ ಕಾಲೇಜು ಆವರಣ, ಐ.ಟಿ. ಬ್ಲಾಕ್ ಹತ್ತಿರ, ಕೆ.ಆರ್. ಸರ್ಕಲ್, ಬೆಂಗಳೂರು ಇಲ್ಲಿ ಅರ್ಜಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
ಅಕ್ಟೋಬರ್ 30