ಕೋಟಕ್ ಮಹೀಂದ್ರಾ ಗ್ರೂಪ್ ಕಂಪನೀಸ್ ವತಿಯಿಂದ ವಿದ್ಯಾರ್ಥಿವೇತನ : ದ್ವಿತೀಯ ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ

(Kotak Kanya Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಕೋಟಕ್ ಕನ್ಯಾ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು. ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಕೋಟಕ್ ಮಹೀಂದ್ರಾ ಗ್ರೂಪ್ ಕಂಪನೀಸ್, ಕೋಟಕ್ ಎಜುಕೇಶನ್ ಫೌಂಡೇಶನ್ ಶಿಕ್ಷಣ ಮತ್ತು ಜೀವನೋಪಾಯದ ಕುರಿತ ಸಿಎಸ್ಆರ್ ಪ್ರಾಜೆಕ್ಟ್ನ ಅಡಿಯಲ್ಲಿ, 12ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಕಡಿಮೆ-ಆದಾಯದ ಕುಟುಂಬಗಳಿಗೆ ಸೇರಿದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಂದ ಕೋಟಕ್ ಕನ್ಯಾ ಸ್ಕಾಲರ್ಶಿಪ್ 2024-25ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• ಭಾರತದಾದ್ಯಂತದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
• ಅಭ್ಯರ್ಥಿಗಳು 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 75% ಅಥವಾ ಹೆಚ್ಚಿನ ಅಂಕಗಳನ್ನು ಅಥವಾ ತತ್ಸಮಾನ ಸಿಜಿಪಿಎಯನ್ನು ಗಳಿಸಿರಬೇಕು.
• ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.6,00,000ಕ್ಕಿಂತ ಕಡಿಮೆ ಇರಬೇಕು.
• ಮಾನ್ಯತೆ ಪಡೆದ ಎನ್ಆರ್ಎಫ್/ ಎನ್ಎಎಸಿ ಯಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ 2024-25 ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್, ಎಂಬಿಬಿಎಸ್, ಬಿಡಿಎಸ್, ಇಂಟಿಗ್ರೇಟೆಡ್ ಎಲ್ಎಲ್ಬಿ (5 ವರ್ಷಗಳು), ಬಿ.ಎಸ್ಸಿ ನರ್ಸಿಂಗ್, ಬಿ.ಫಾರ್ಮಸಿ, ಇಂಟಿಗ್ರೇಟೆಡ್ ಬಿಎಸ್-ಎಂಎಸ್/ಬಿಎಸ್-ರಿಸರ್ಚ್ ಇನ್ ಐಎಸ್ಇಆರ್, ಐಐಎಸ್ಸಿ (ಬೆಂಗಳೂರು) ಅಥವಾ (ಡಿಸೈನ್, ಆರ್ಕಿಟೆಕ್ಚರ್, ಇತ್ಯಾದಿ) ಇತರ ವೃತ್ತಿಪರ ಕೋರ್ಸ್ಗಳಿಗೆ ಮೊದಲ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರು ಅರ್ಹರಾಗಿರುತ್ತಾರೆ.
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ವರ್ಷಕ್ಕೆ ರೂ.1.5 ಲಕ್ಷ
(ಪ್ರತಿ ವರ್ಷ ವಿದ್ಯಾರ್ಥಿವೇತನದ ನವೀಕರಣವು ಕೋಟಾಕ್ ಶಿಕ್ಷಣ ಪ್ರತಿಷ್ಠಾನದ ಸ್ವಂತ ವಿವೇಚನೆಯಲ್ಲಿರುತ್ತದೆ)
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/KKGS3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30-09-2024