ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ 1,600-4,000 ವರೆಗೆ ಸ್ಕಾಲರ್ಶಿಪ್
(Pm Scholarship) ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ NSP ಪೋಸ್ಟ್-ಮೆಟ್ರಿಕ್ ಸ್ಕಾಲರ್ಶಿಪ್ ಫಾರ್ ಸ್ಟೂಡೆಂಟ್ಸ್ ವಿತ್ ಡಿಸೆಬಿಲಿಟೀಸ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ?, ಎಷ್ಟು ಸ್ಕಾಲರ್ ಸಿಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಎನ್ಎಸ್ಪಿ ಪೋಸ್ಟ್-ಮೆಟ್ರಿಕ್ ಸ್ಕಾಲರ್ಶಿಪ್ ಫಾರ್ ಸ್ಟೂಡೆಂಟ್ಸ್ ವಿತ್ ಡಿಸೆಬಿಲಿಟೀಸ್ 2024-25, 11ನೇ ತರಗತಿಯ ನಂತರದ ವಿಶೇಷಚೇತನ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಭಾರತ ಸರ್ಕಾರದ ಡಿಪಾರ್ಟ್ಮೆಂಟ್ ಆಫ್ ಎಂಪವರ್ಮೆಂಟ್ ಆಫ್ ಪರ್ಸನ್ಸ್ ವಿತ್ ಡಿಸೆಬಿಲಿಟೀಸ್ನ ಉಪಕ್ರಮವಾಗಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಯುನಿವರ್ಸಿಟಿ ಗ್ರಾಂಟ್ ಕಮಿಷನ್ (ಯುಜಿಸಿ) / ಆಲ್ ಇಂಡಿಯಾ ಕೌನ್ಸಿಲ್ ಆಫ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ)ನಿಂದ ಮಾನ್ಯತೆ ಪಡೆದ ಶಾಲೆ/ವಿಶ್ವವಿದ್ಯಾಲಯದಲ್ಲಿ 11ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನವನ್ನು ಮುಂದುವರಿಸಲು ಸಿದ್ಧರಿರುವ ಭಾರತೀಯ ನಾಗರಿಕರಿಗೆ ಮುಕ್ತವಾಗಿರುತ್ತದೆ.
* ಅಂಗವಿಕಲರ ಹಕ್ಕುಗಳ ಕಾಯ್ದೆ, 2016’ರಲ್ಲಿ ವ್ಯಾಖ್ಯಾನಿಸಲಾಗಿರುವಂತೆ, ಅರ್ಜಿದಾರರು ಕನಿಷ್ಠ 40% ಅಂಗವೈಕಲ್ಯವನ್ನು ಹೊಂದಿರಬೇಕು,
* ವಾರ್ಷಿಕ ಆದಾಯವು ರೂ.2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
1,600ರ ವರೆಗಿನ ನಿರ್ವಹಣಾ ಭತ್ಯೆ, ₹4,000ದ ವರೆಗಿನ ಅಂಗವೈಕಲ್ಯ ಭತ್ಯೆ ಮತ್ತು ಇತರ ಪ್ರಯೋಜನಗಳು.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/PMSD1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
31-10-2024