Homeಪ್ರಮುಖ ಸುದ್ದಿ

ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ರಾಜ್ಯ ಸರ್ಕಾರವು ಬುಧವಾರ ಆದೇಶ ಹೊರಡಿಸಿದೆ.

ಈ ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ. ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ನಿಷೇಧಿಸಿ ಸರ್ಕಾರ ಸತ್ತೋಲೆ ಹೊರಡಿಸಿದೆ.

ಇತ್ತೀಚೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ. ಫೆಬ್ರವರಿ 2024ರಲ್ಲಿ ಹೊರಡಿಸಲಾದ ಆದೇಶದ ಪ್ರಕಾರ ರಾಷ್ಟ್ರೀಯ ರಜಾದಿನಗಳು, ರಾಜ್ಯ ಹಬ್ಬಗಳು ಮತ್ತು ಜಯಂತಿಗಳನ್ನು ಮಾತ್ರ ಆಚರಿಸಲು ಅನುಮತಿ ಇದೆ.

ಸುತ್ತೋಲೆನಲ್ಲಿ ಏನಿದೆ?

ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ದತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ. ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.

ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸಧೃಡ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ.

ಆದರೆ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಇತ್ಯಾದಿ ಗಣ್ಯವ್ಯಕ್ತಿಗಳು ಅವರ ಹಾಗೂ ಅವರ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಆಚರಿಸಲ್ಪಡುತ್ತಿರುವ ಹುಟ್ಟುಹಬ್ಬದೊಂದಿಗೆ ಹೋಲಿಕೆ ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.

ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟುಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button