ಪ್ರಮುಖ ಸುದ್ದಿ
ಭೀಕರ ಅಪಘಾತ : ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ
ಕೊಡಗು: ಕಾರು, ಲಾರಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಬಳಿಯ ಆಳೆಕಾಡು ಸಮೀಪ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿಯಾದ ಪರಿಣಾಮ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ
ಕಿರಣ್(23), ಶ್ರವಣ್(25) ಮೃತಪಟ್ಟಿದ್ದು ರಾಜು ಮತ್ತು ಪುಟ್ಟೇಗೌಡ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರವಾಸಕ್ಕಾಗಿ ಬೆಂಗಳೂರಿನಿಂದ ಮಡಿಕೇರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಸುಂಟಿಕೊಪ್ಪ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.