Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ

ಇಂತಹ ಮಹಿಳೆಯರಿಗೆ ಸಿಗಲಿದೆ 11,000 ರೂ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

(Matru Vandana Yojana:) ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಯೋಜನೆಯಲ್ಲಿ ಇಂತಹ ಮಹಿಳೆಯರಿಗೆ 11,000 ಹಣವನ್ನು ಪಡೆಯಬಹುದಾಗಿದೆ. ಹಾಗಾದರೆ ಯಾವ ಯೋಜನೆ, ಯಾರು ಅರ್ಹರು, ಇದಕ್ಕಾಗಿ ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಯಾವ ಯೋಜನೆಯಲ್ಲಿ ಈ ಲಾಭ ಪಡೆಯಬಹುದು:
ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯಡಿಯಲ್ಲಿ ಈ ಲಾಭವನ್ನು ಪಡೆಯಬಹುದಾಗಿದೆ. ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ಗರ್ಭಿಣಿ ಆದಾಗ ಮತ್ತು ಜನ್ಮ ನೀಡಿದ ನಂತರ ಬೇರೆ ಬೇರೆ ಕಂತುಗಳಲ್ಲಿ ಒಟ್ಟು 11,000 ಆರ್ಥಿಕ ನೆರವು ನೀಡಲಾಗುತ್ತದೆ.

ಮಾತೃತ್ವ ವಂದನಾ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ 2017 ರ ಬಜೆಟ್ ನಲ್ಲಿ ಘೋಷಣೆ ಮಾಡಿದರು. ಬೇರೆ ಬೇರೆ ಮೂರು ಕಂತುಗಳಲ್ಲಿ 11 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಜೊತೆಗೆ ಮಹಿಳೆಯರ ಖಾತೆಗೆ ನೇರವಾಗಿ ಈ ಹಣವನ್ನ ವರ್ಗಾವಣೆ ಮಾಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯ ಅಡಿಯಲ್ಲಿ ಹಣಕಾಸಿನ ನೆರವಿನ ಜೊತೆಗೆ ಗರ್ಭಿಣಿ ಸ್ತ್ರೀಗೆ ಉಚಿತ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಒದಗಿಸಲಾಗುತ್ತದೆ.

ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಎರಡು ಕಂತುಗಳಲ್ಲಿ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಮಹಿಳೆ ಮೊದಲ ಬಾರಿಗೆ ತಾಯಿಯಾದರೆ 5000 ಹಾಗೂ ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನರ ನೀಡಿದರೆ 6,000 ಗಳನ್ನು ನೀಡಲಾಗುವುದು. ಇನ್ನು 5,000 ಗಳನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ.

ಮೊದಲ ಗರ್ಭಾವಸ್ಥೆಯಲ್ಲಿ 3000 ಹಾಗೂ ಜನನ ನೋಂದಣಿ ಆಗಿ ಮಗುವಿಗೆ ಮೊದಲ ಲಸಿಕೆ ಕೊಟ್ಟ ನಂತರ 2000 ಕೊಡಲಾಗುವುದು. ಆದರೆ ಎರಡನೇ ಹೆಣ್ಣು ಮಗುವಿಗೆ ಜನನ ನೀಡಿದರೆ ಜನನ ಆದ ಬಳಿಕ 6,000 ಗಳನ್ನು ಒಂದೇ ಬಾರಿಗೆ ಖಾತೆಗೆ ವರ್ಗಾವಣೆ ಮಾಡಲಾಗುವುದು.

ಹಾಗಾದರೆ ಯಾರಿಗೆ ಸಿಗುತ್ತೆ ಆರ್ಥಿಕ ನೆರವು?:

  • ಭಾರತೀಯ ನಾಗರಿಕರಾಗಿರಬೇಕು
  •  19 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳಿಗೆ ಸಿಗುತ್ತದೆ
  •  ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಬಹುದು
  • ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು ಕೂಡ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ?:
ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ ಆಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಒದಗಿಸಿದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಹಣವನ್ನು ಖಾತೆಗೆ ಬರುವಂತೆ ಮಾಡಬಹುದು.

ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ https://pmmvy.wcd.gov.in/Account/Login ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?;

  • ಆಧಾರ್ ಕಾರ್ಡ್
  •  ಜನನ ಪ್ರಮಾಣ ಪತ್ರ
  •  ಆದಾಯ ಪ್ರಮಾಣ ಪತ್ರ
  •  ಪಾನ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಪಾಸ್ ಪೋರ್ಟ್ ಅಳತೆಯ ಫೋಟೋ

Related Articles

Leave a Reply

Your email address will not be published. Required fields are marked *

Back to top button