ಪ್ರಮುಖ ಸುದ್ದಿ
ಶಹಾಪುರಃ ನಾಳೆ ಜಿಲ್ಲಾಧಿಕಾರಿಗಳಿಂದ ಅಹವಾಲು ಸ್ವೀಕಾರ
ಮಂಗಳವಾರ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ
ಸೆ. 27 ರಂದು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ
ಜಿಲ್ಲಾಧಿಕಾರಿಗಳಿಂದ ಅಹವಾಲು ಸ್ವೀಕಾರ
yadgiri, ಶಹಾಪುರಃ ಸೆ.27 ಮಂಗಳವಾರ ನಗರದ ತಹಸೀಲ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಅವರು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆಯವರೆಗೆ ಲಭ್ಯವಿದ್ದು, ಸಾರ್ವಜನಿಕರು ಯಾವುದೆ ಕುಂದು ಕೊರತೆಗಳಿದ್ದಲ್ಲಿ ಮನವಿ ಸಲ್ಲಿಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಹಾಪುರ ತಾಲೂಕಿನ ನಾಗರಿಕರು ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಿ ಪರಿಹರಿಸಿಕೊಳ್ಳಬಹುದು. ಸಮಸ್ಯೆಗಳಿದ್ದಲ್ಲಿ ಪರಿಹಾರ ಕಂಡುಕೊಳ್ಳಬೇಕೆಂದು ತಹಸೀಲ್ದಾರ ಮಧುರಾಜ್ ಅವರು ನಾಗರಿಕರಿಗೆ ಕರೆ ನೀಡಿದ್ದಾರೆ.
————-