ಪ್ರಮುಖ ಸುದ್ದಿ
ಎಂಇಎಸ್ ಪುಂಡರಿಗೆ ಕಠಿಣ ಶಿಕ್ಷೆ ನೀಡಿ – ತಳವಾರ
ಎಂಇಎಸ್ ಪುಂಡರಿಗೆ ಕಠಿಣ ಶಿಕ್ಷೆ ನೀಡಿ – ತಳವಾರ
yadgiri, ಶಹಾಪುರಃ ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ ಆಗ್ರಹಿಸಿದರು.
ನಗರದ ಭೀಮರಾಯನ ಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಶಿವಾಜಿ ಮಹಾರಾಜ ಹಾಗೂ ಸಂಗೊಳ್ಳಿ ರಾಯಣ್ಣನಂತಹ ದೇಶಭಕ್ತರಿಗೆ ಅವಮಾನ ಮಾಡಿದವರು ಯಾರೇ ಆಗಿರಲಿ ಅಂತವರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದರು.
ಬೆಳಗಾವಿ ಕರ್ನಾಟಕದ್ದು, ಕನ್ನಡದ ನೆಲ ಅದನ್ನು ಎಂದಿಗೂ ಬಿಟ್ಟು ಕೊಡಲಾಗದು, ಸುಖಾಸುಮ್ಮನೆ ಸದಾ ಕಾಲು ಕೆದರಿ ಗಲಾಟೆ ಮಾಡುವ ಎಂಇಎಸ್ ಪುಂಡರಿಗೆ ತಕ್ಕ ಪಾಠ ಕಲಿಸಬೇಕುದೆ. ಆ ನಿಟ್ಟಿನಲ್ಲಿ ಸರ್ಕಾರ ದಿಟ್ಟ ನಿಲುವು ತೆಗೆದುಕೊಳ್ಳುವಂತೆ ಸಿಎಂ ಅವರಿಗೆ ಮನವಿ ಮಾಡಲಾಗುವದು. ಕನ್ನಡದ ನೆಲ, ಜಲ, ಭಾಷೆಗೆ ಧಕ್ಕೆ ಬಂದಾಗ ನಾಡಿನ ಎಲ್ಲರು ಪಕ್ಷಬೇಧ ಮರೆತೂ ಒಂದಾಗುತ್ತೇವೆ ಎಂಬುದನ್ನು ಆ ಪುಂಡರಿಗೆ ತೋರಿಸಬೇಕಿದೆ ಎಂದರು.