ಪ್ರಮುಖ ಸುದ್ದಿ
ನಿದ್ದೆ ಮುಖ್ಯಮಂತ್ರಿಗೆ ಇದು ಎಚ್ಚರಿಕೆಯ ಗಂಟೆ – ವಿಪಕ್ಷ ನಾಯಕ ಶೆಟ್ಟರ್ ಗುಡುಗು
ಬಳ್ಳಾರಿ: ಸದನದಲ್ಲಿ ರಾಜ್ಯದ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಸಿಎಂ ಸಿದ್ಧರಾಮಯ್ಯ ಮಾತ್ರ ನಿದ್ದೆ ಮಾಡುತ್ತಿದ್ದರು. ನಾಲ್ಕೂವರೆ ವರ್ಷಗಳ ಕಾಲ ಮುಖ್ಯಮಂತ್ರಿ ಸಿದ್ಧರಾಮಯ್ಯ ನಿದ್ದೆ ಮಾಡಿದ್ದಾರೆ. ಈಗ ಕರ್ನಾಟಕ ರಾಜ್ಯದ ಬಗ್ಗೆ ಯೋಚನೆ ಮಾಡುತ್ತಿದ್ದು ಭಯ ಶುರುವಾಗಿದೆ. ಬಿಜೆಪಿಯ ಪರಿವರ್ತನಾ ಯಾತ್ರೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಜಗಧೀಶ್ ಶೆಟ್ಟರ್ ಗುಡುಗಿದ್ದಾರೆ.
ಪರಿವರ್ತನಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದ ಖರ್ಚಿನಲ್ಲಿ ಸಾಧನಾ ಸಮಾವೇಶ ಮಾಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಇತ್ತ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಹಿಂದೂಗಳ ಹತ್ಯೆ ಆಗುತ್ತಿದೆ. ಆದರೆ, ಸಿಎಂ ಮಾತ್ರ ಜಾತಿಯ ಬೆಂಕಿ ಹಚ್ಚುವ ಕೆಲಸದಲ್ಲಿ ತಲ್ಲೀನರಾಗಿದ್ದಾರೆ ಎಂದು ಶೆಟ್ಟರ್ ಆರೋಪಿಸಿದ್ದಾರೆ.