ಪ್ರಮುಖ ಸುದ್ದಿ
ಕಾಂಗ್ರೆಸ್ ಗೆ ಕಾನೂನಿನ ಮೇಲೆ ನಂಬಿಕೆ ಇಲ್ಲ- ಶೆಟ್ಟರ್
ಹುಬ್ಬಳ್ಳಿಃ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ ಎನ್ನುವದು ತಪ್ಪು. ಇಡಿ ಮತ್ತು ಐಟಿ ದಾಳಿಯಿಂದ ಕಾಂಗ್ರೆಸ್ ನವರು ಮಾಡಿ ಇಟ್ಟಿದ್ದ ಕಪ್ಪು ಹಣ ಹೊರ ಬರುತ್ತಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಚಿವ ಜಗಧೀಶ ಶೆಟ್ಟರ್ ತಿಳಿಸಿದ್ದಾರೆ.
ಕಾಂಗ್ರೆಸ್ ಮೊಸರಿನಲ್ಲಿ ಕಲ್ಲು ಹಡುಕುತ್ತಿದೆ. ಐಟಿ ಮತ್ತು ಇಡಿ ಸಂವಿಧಾನಾತ್ಮಕ ಸಂಸ್ಥೆಗಳು ಅವುಗಳ ಕಾರ್ಯವನ್ನು ನಿರಂತರವಾಗಿ ನಿರ್ವಹಿಸುತ್ತಿವೆ. ಕಾಂಗ್ರೆಸ್ ನವರ ಹೇಳಿಕೆ ಗಮನಿಸಿದರೆ, ಅವರಿಗೆ ಕಾನೂನಿನ ಮೇಲೆ ನಂಬಿಕೆ ಇಲ್ಲವೆಂದು ತಿಳಿಯುತ್ತದೆ ಎಂದಿದ್ದಾರೆ.