ವಿನಯ ವಿಶೇಷ
ಶಾರ್ಟ್ ಸರ್ಕ್ಯೂಟ್ ಎಲೆಕ್ಟ್ರಿಕಲ್ ಅಂಗಡಿಗೆ ಬೆಂಕಿ- ಅಪಾರ ಹಾನಿ
ಶಾರ್ಟ್ ಸರ್ಕ್ಯೂಟ್ ಎಲೆಕ್ಟ್ರಿಕಲ್ ಅಂಗಡಿಗೆ ಬೆಂಕಿ
ಯಾದಗಿರಿಃ ಜಿಲ್ಲೆಯ ಶಹಾಪುರ ನಗರದ ತರಕಾರಿ ಮಾರ್ಕೇಟ್ ನಲ್ಲಿರುವ ಓಂ ಸುಂಧಾ ಎಲೆಕ್ಟ್ರಿಕಲ್ ಅಂಗಡಿಗೆ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ತಗುಲಿದ್ದು, ಅಂಗಡಿಯಲ್ಲಿನ ವಿದ್ಯುತ್ ಸಾಮಾಗ್ರಿಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಅಂದಾಜು 23 ಲಕ್ಷ ರೂ. ಎಲೆಕ್ಟ್ರಿಕಲ್ ಸಾಮಾಗ್ರಿಗಳು ಸುಟ್ಟಿವೆ ಎಂದು ಅಂಗಡಿ ಮಾಲೀಕ ಹರಿಶ್ಚಂದ್ರ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ನಗರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಾಗಿದೆ.