Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿವಿನಯ ವಿಶೇಷ
ಪ್ರವಾಸಿಗರೇ ಗಮನಿಸಿ: ಶಿವಮೊಗ್ಗದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಅಪಾಯಮಟ್ಟ ಮಟ್ಟ ಮೀರಿ ನದಿಗಳು, ಹಳ್ಳ ಕೊಳ್ಳಗಳು ಹರಿಯುತ್ತಿದೆ. ಹೀಗಾಗಿ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಪೊಲೀಸ್ ಇಲಾಖೆ ಸನ್ನದ್ಧಗೊಂಡಿದೆ.
ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು. ನದಿಯಲ್ಲಿ ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಲಾಗಿದೆ. ಆಯಾಕಟ್ಟಿನಲ್ಲಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡಲು ಮನವಿ ಮಾಡಲಾಗಿದೆ.